Standard Yellow on Black Yellow on Blue Fuchsia on Black
Font Decrease Standard Font Increase
Default width Wider width Widest width

Under Construction

Site is under Development and for Internal use of the Department only

ಇಲಾಖೆಯ ಪರಿಚಯ‌

ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾಧಿಪತ್ಯ,ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ,ಭೂಕಂದಾಯ ಸಂಗ್ರಹಣೆ,ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಮುಖ ಜವಾಬ್ಧಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ.

ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು ಹೆಚ್ಚು ವೃದ್ದಿಯಾದಂತೆ ವೃತ್ತಿಗಳಲ್ಲಿನ ತಾರತಮ್ಯ, ರಾಜ್ಯದ ಕ್ಲಿಷ್ಠಕರವಾದ ಆಡಳಿತ ನಿರ್ವಹಣೆಗೆ ವಿಶಿಷ್ಠ ಇಲಾಖೆಗಳು ಹೊರಹೊಮ್ಮಿದವು. ಕಾಲ ಬದಲಾವಣೆಯಾದಂತೆ ಹಲವಾರು ಇಲಾಖೆಗಳು ರೂಪಿತಗೊಂಡು ಅಸ್ತಿತ್ವಕ್ಕೆ ಬಂದವು. ವಾಸ್ತವದ ಸಂಗತಿಯೆಂದರೆ ಪ್ರಾರಂಭದಲ್ಲಿ ಎಲ್ಲಾ ಇಲಾಖೆಗಳು ಕಂದಾಯ ಇಲಾಖೆಯಡಿಯಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದು ನಂತರ ಒಂದೊಂದಾಗಿ ಪ್ರತ್ಯೇಕಗೊಂಡವು. ಏನೇ ಆದರೂ ಇಂದಿಗೂ ಸಹ ರಾಜ್ಯದ ಹಾಗೂ ಸಮಾಜದ ಪ್ರಮುಖವಾದ ನಂದಿನ ಕೆಲಸ ಕಾರ್ಯಗಳನ್ನು ಕಂದಾಯ ಇಲಾಖೆಯೇ ನಿರ್ವಹಿಸುತ್ತಿದೆ. ಈ ಕಾರಣಗಳಿಂದಾಗಿಯೇ ಸರ್ಕಾರದಲ್ಲಿ ಕಂದಾಯ ಇಲಾಖೆಯು ``ಮಾತೃ ಇಲಾಖೆ``ಯೆಂದು ಕರೆಯಲ್ಪಡುತ್ತದೆ.

ಭಾರತದ ರಾಷ್ಟ್ರೀಯ ಪೋರ್ಟಲ್

 India Portal

ಅಂತರಜಾಲದ ನಿರ್ವಹಣೆ

ಕಂದಾಯ ಇಲಾಖೆ,
5ನೇ ಮಹಡಿ, ಬಹುಮಹಡಿಗಳ ಕಟ್ಟಡ, 2ನೇ ಹಂತ,
ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು 560 001

ಅಂತರಜಾಲದ ರಚನೆ

National Informatics Centre, Karnataka
ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ, ಕರ್ನಾಟಕ